ಜಿಲೆಟಿನ್ ಸ್ಪೋಟ ಪ್ರಕರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ…. ಬೆಂಗಳೂರು,ಜನವರಿ,22,2021(..):ಶಿವಮೊಗ್ಗ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಹಾಗೆಯೇ ನಾಳೆ ಘಟನಾಸ್ಥಳ ಹುಣಸೋಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಸುತ್ತಮುತ್ತ ಗ್ರಾಮಸ್ಥರ ಜತೆ ಚರ್ಚೆ ನಡೆಸುತ್ತೇನೆ. ಈಗಾಗಲೇ ತನಿಖೆಗೆ ಸೂಚನೆ ನೀಡಲಾಗಿದೆ. ತನಿಖೆ ನಡೆದು ವರದಿ ಬಂದ ಬಳಿಕ ಘಟನೆಗೆ ಕಾರಣ ತಿಳಿಯಲಿದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು. ಹಾಗೆಯೇ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳನ್ನ ಬಂಧಿಸಲಾಗಿದೆ. ಘಟನೆ ಸಂಬಂಧ ಎಷ್ಟೇ ಪ್ರಭಾವಿಗಳಿದ್ದರೂ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. …. : .5 , . 22, 2021 (..): .. . 5 , ’ . , . “ ,” . , . “ ’ , ,” .: .. / / / / .5 : - - -5 - – - -