ಜ.26ರ ‘ಟ್ರ್ಯಾಕ್ಟರ್‌ ರ‍್ಯಾಲಿ’ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ಧ ಅರ್ಜಿ ಹಿಂಪಡೆದ ಕೇಂದ್ರ ಸರ್ಕಾರ… ನವದೆಹಲಿ,ಜನವರಿ,20,2021(..): ಜ.26ರ ‘ಟ್ರ್ಯಾಕ್ಟರ್‌ ರ‍್ಯಾಲಿ‘ಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿದೆ. ‘ಗಣರಾಜ್ಯೋತ್ಸವದಂದು ರೈತ ಸಂಘಟನೆ ಕರೆ ನೀಡಿರುವ ಟ್ರ್ಯಾಕ್ಟರ್‌ ರ‍್ಯಾಲಿ ವಿಚಾರ ಪೊಲೀಸರು ಇತ್ಯರ್ಥಪಡಿಸಬೇಕು‘ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎಸ್‌.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿತು. ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಪೀಠ, ‘ಈ ರ‍್ಯಾಲಿ ವಿಷಯಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅರ್ಜಿಯನ್ನು ಹಿಂದೆತೆಗೆದುಕೊಳ್ಳಲು ಅವಕಾಶ ನೀಡುತ್ತೇವೆ‘ ಎಂದು ತಿಳಿಸಿತು. ಬಳಿಕ ರ‍್ಯಾಲಿಗೆ ತಡೆಯಾಜ್ಞೆ ನೀಡುವಂತೆ ಕೋರಿ ದೆಹಲಿ ಪೊಲೀಸರ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. …. . ‘ ’ . 26New , . 20, 2021 (..): ’ ‘ ’ 26, . .. . . ’ . . “ ’ . . .” . .: / . / / : – - – - --