ಕಾಂಗ್ರೆಸ್ ನ ರಾಜಭವನ ಚಲೋ ಬಗ್ಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ…… ಬೆಂಗಳೂರು, ಜನವರಿ,20,2021(..):ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ನಡೆಸುತ್ತಿದ್ದು ಈ ಬಗ್ಗೆ ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯಕಾಂಗ್ರೆಸ್ ನಾಟಕೀಯವಾಗಿ ವಿರೋಧ ವ್ಯಕ್ತಪಡಿಸುತ್ತಿದೆ. ನಿಮ್ಮ ಅಧಿಕಾರದ ವೇಳೆ ರೈತರ ಆತ್ಮಹತ್ಯೆ ಹೆಚ್ಚಾಗಿತ್ತು. ನೀವು ರೈತರ ಪರ ಆಡಳಿತ ನಡೆಸಿದ್ದರೇ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿರಲಿಲ್ಲ ಅಲ್ಲವೇ..? ಎಂದು ಪ್ರಶ್ನಿಸಿದ್ದಾರೆ. 38 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಆ ವೇಳೆ ರೈತರ ಕಣ್ಣೊರೆಸುವ ಬದಲು ಟಿಪ್ಪು ಜಯಂತಿ ಆಚರಿಸುತ್ತಿದ್ದಿರಿ. ಈಗ ಇದು ಕಾಂಗ್ರೆಸ್ ನವರು ನಾಟಕೀಯ ಚಲೋ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ಟೀಕಿಸಿದೆ. … , . 20, 2021 (..): ’ , ’ . ’ . , , ’ . “’ . - , ’ ’ , ’ ?” “ 38,000 , , . ,” .: / / : - - - –