ಇಂದು ರಾಜ್ಯ ಕಾಂಗ್ರೆಸ್‌ ನಿಂದ ‘ರಾಜಭವನ ಚಲೋ’….. ಬೆಂಗಳೂರು,ಜನವರಿ,20,2021(..):ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯಿದೆಗಳನ್ನು ವಿರೋಧಿಸಿ ‘ಇಂದು ರಾಜ್ಯ ಕಾಂಗ್ರೆಸ್‌ ರಾಜಭವನ ಚಲೋ’ ನಡೆಸಲಿದೆ. ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದು, ರಾಜ್ಯ, ಕೇಂದ್ರ ಸರ್ಕಾರಗಳ ನೀತಿಗಳ ವಿರುದ್ಧ ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡು ಆಕ್ರೋಶ ವ್ಯಕ್ತಪಡಿಸಿದೆ. ಇಂದು ಬೆಳಿಗ್ಗೆ.11 ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಿರುವ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ನಡೆಯಲಿದ್ದು, ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕೊತ್ತಾಯ ಪತ್ರ ಸಲ್ಲಿಕೆ ಮಾಡಲಿದ್ದಾರೆ. ರಾಜಭವನ ಚಲೋ, ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬುಧವಾರ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. : --‘- --