ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆಯ ವೇಳಾಪಟ್ಟಿ ಪ್ರಕಟ: ವಿವರ ಇಲ್ಲಿದೆ. ಬೆಂಗಳೂರು,ಮೇ,2,2024 (..):ವಿಧಾನ ಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ಜೂನ್ 3 ರಂದು ಮತದಾನ ನಡೆಯಲಿದೆ. ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆದು ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 3 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮೇ 9 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು , ಮೇ 16ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನಾಮಪತ್ರ ವಾಪಸ್ ಪಡೆಯಲು ಮೇ 20 ಕಡೆಯ ದಿನಾಂಕವಾಗಿದೆ. : , ,