ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ- ಸಿಎಂ ಬಿ.ಎಸ್ ಯಡಿಯೂರಪ್ಪ… ಉಡುಪಿ,ಜನವರಿ,19,2021(..):ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ಉಡುಪಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿನ ಹಣಕಾಸಿನ ಇತಿಮಿತಿ ನೋಡಿಕೊಂಡು ಬಜೆಟ್ ಘೋಷಣೆ ಮಾಡಲಾಗುತ್ತದೆ. ಮಾರ್ಚ್ ಮೊದಲ ವಾರದಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ. ವಿಧಾನಮಂಡಲ ಅಧಿವೇಶನ ಶುರುವಾಗುತ್ತಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಹೇಳಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ,ಇನ್ನೆರಡು ದಿನಗಳಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು. ಇನ್ನು ಶಾಸಕ ರೇಣುಕಾಚಾರ್ಯ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ ರೇಣುಕಾಚಾರ್ಯ ಜತೆ ಮಾತುಕತೆ ನಡೆಸಿದ್ದೇವೆ. ಯಾವುದೇ ಗೊಂದಲದ ವಾತಾವರಣ ಇಲ್ಲ ಎಂದರು. – , . 19, 2021 (..): .. 2021. .. , “ . . ,” . .: .. / : – – –- .