“ಸಿದ್ದರಾಮಯ್ಯ ಅವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಕ ಮಾಡಿಲ್ಲ” : ಡಿಸಿಎಂ ಗೋವಿಂದ ಕಾರಜೋಳ ಬೆಂಗಳೂರು,ಜನವರಿ,19,2021(..): ಸಿದ್ದರಾಮಯ್ಯ ಅವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಕ ಮಾಡಿಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಆಕ್ರೋಶವ್ಯಕ್ತಪಡಿಸಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ಗೆ ಯಡಿಯೂರಪ್ಪ ಅವರನ್ನು ತೆಗೆದುಹಾಕ್ತಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಅವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಕ ಮಾಡಿಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ದಾಸರಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. :------