ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಲು ಹೋದ್ರೆ ರಾಜ್ಯದಲ್ಲಿ ರಕ್ತಕ್ರಾಂತಿ- ವಾಟಾಳ್ ನಾಗರಾಜ್ ಎಚ್ಚರಿಕೆ…. ಬೆಂಗಳೂರು,ಜನವರಿ,18,2021(..): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ , ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಲು ಹೋದ್ರೆ ರಾಜ್ಯದಲ್ಲಿ ರಕ್ತಕ್ರಾಂತಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಉದ್ಧವ್ ಠಾಕ್ರೆ ಒಬ್ಬ ಹುಚ್ಛ. ಸಿಎಂಗೆ ಶಕ್ತಿ, ಪ್ರೀತಿ, ಬದ್ಧತೆ ಇಲ್ಲ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಲು ಹೋದ್ರೆ ರಾಜ್ಯದಲ್ಲಿ ರಕ್ತಕ್ರಾಂತಿ ನಡೆಯಲಿದೆ ನಾಳೆ ಬೆಳಗ್ಗೆ 11.30 ಕ್ಕ ಮುಂದಿನ ಹೋರಾಟದ ಬಗ್ಗೆ ಸಭೆ ಸೇರಿ ನಿರ್ಧರಿಸುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧವೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. … : , . 18, 2021 (..): . . - , . “ . . 11.30 ,” .: / / / / : –- - .