“ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನ” : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರು,ಜನವರಿ,17,2021(..) :ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ. ರೈತ ವಿರೋಧಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿ ಜನವರಿ 20 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಿಂದ ರಾಜಭವನದವರೆಗೆ ರ್ಯಾಲಿ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. :-- ---- --