ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖೆಗೆ ಹಾಜರಾಗಲು ಕಾಲಾವಕಾಶ ಕೇಳಿದ ಪ್ರಜ್ವಲ್ ರೇವಣ್ಣ. ಬೆಂಗಳೂರು,ಮೇ,1,2024 (..):ತನ್ನ ವಿರುದ್ದ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದಾರೆ. ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನ್‌ಗೆ ತೆರಳಿದ್ದರು. ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದು ಈ ಸಂಬಂಧ ಪ್ರಜ್ವಲ್ ರೇವಣ್ಣ ‘ಎಕ್ಸ್’ನಲ್ಲಿ ಮನವಿ ಮಾಡಿದ್ದಾರೆ. ಎಸ್‌ಐಟಿ ನೋಟೀಸ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್, ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ಖುದ್ದಾಗಿ ಬಂದು ತನಿಖೆಗೆ ಹಾಜರಾಗಲು ಕಾಲಾವಕಾಶ ನೀಡಬೇಕು ಎಂದು ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ .. ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ’ ಎಂದು ಬರೆದಿದ್ದಾರೆ. : , ,,