ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಮಾತನಾಡುತ್ತಿರುವರಿಗೆ ನೈತಿಕತೆ ಇದೆಯೇ? : ಸಚಿವ ಬಿ.ಶ್ರೀರಾಮುಲು ಬೆಂಗಳೂರು,ಜನವರಿ,16,2021(..) :ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು, ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವ ಅವರಿಗೆ ನೈತಿಕತೆ ಇದೆಯೇ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಪ್ರಶ್ನಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಹುಶಃ ಅವರಿಗೆ ಮತಿಭ್ರಮಣೆ ಆಗಿರಬೇಕು ಎಂದು ಕಿಡಿಕಾರಿದ್ದಾರೆ.ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ಸೋಲಿಸಿದರು. ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. :----–?-:-.