ಕೊರೋನಾ ಲಸಿಕೆ ಬಗ್ಗೆ ಯಾರಿಗೂ ಭಯ, ಆತಂಕ ಬೇಡ- ಸಿಎಂ ಬಿಎಸ್ ಯಡಿಯೂರಪ್ಪ…. ಬೆಂಗಳೂರು,ಜನವರಿ,16,2021(..):ದೇಶದ ವಿಜ್ಞಾನಿಗಳು ಕೊರೋನಾ ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಯಾರಿಗೂ ಕೊರೋನಾ ಲಸಿಕೆ ಬಗ್ಗೆ ಯಾವುದೇ ಆತಂಕ, ಭಯ ಬೇಡ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು. ಚಾಲನೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದರು. 3 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಬಿಡದಿಯ ಮಹಿಳೆಯೊಬ್ಬರಿಗೆ ಲಸಿಕೆ ನೀಡಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ನನ್ನ ಸಮ್ಮುಖದಲ್ಲಿ ನೀಡಲಾಯಿತು. ಲಸಿಕೆ ಬಗ್ಗೆ ಯಾರಿಗೂ ಭಯ ಆತಂಕ ಬೇಡ. ರಾಜ್ಯದ ಜನತೆಯ ಪರವಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. : – - -