ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಪೆಕ್ಸ್ ಸಮಿತಿ ಸಭೆ: ಸಿಎಂ ಬಿಎಸ್ ವೈ ಭಾಗಿ…. ಬೆಂಗಳೂರು, ಜನವರಿ 15,2021(..):ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು. ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಸ್ವಾಗತಿಸಿದರು. : – - -