“ಜ.17 ರಂದು ಕನಕದಾಸರ 533 ನೇ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ” ಮೈಸೂರು,ಜನವರಿ,15,2021(..): ಮೈಸೂರು ವಿವಿ ಕನಕ ನೌಕರರ ಸಂಘದ ವತಿಯಿಂದ ರಾಣಿಬಹದ್ದೂರ್ ಸಭಾಂಗಣದಲ್ಲಿ ಜ.17 ರಂದು ಕನಕದಾಸರ ೫೩೩ನೇ ಜಯಂತಿ ಮತ್ತು ಪ್ರತಿಭಾಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜು ಸಿ.ಜಟ್ಟಿಹುಂಡಿ ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ‌ ನೀಡಿದ ಅವರು, ಕಾರ್ಯಕ್ರಮವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮಾಜಿ ಸಚಿವ ಹೆಚ್.ಎಂ ರೇವಣ್ಣ, ಮೈಸೂರು ವಿವಿ ಕುಲಪತಿ ಪ್ರೊ.ಜಿ ಹೇಮಂತ್ ಕುಮಾರ್, ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲಿಕಾ ಘಂಟಿ, ಸೇರಿ ಇತರರು ಭಾಗಿಯಾಗಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರುಗಳಾದ ಬೀರೇಗೌಡ ಮತ್ತು ನಂದೀಶ್.ಕೆ ಇದ್ದರು. … 533rd . 17Mysuru, . 15, 2021 (..): 533rd . 17 . , . , , .. , . . , -, , . , -, , . .: 533rd / / . 17 :.17–3rd ----