“ರಾಮ ಮಂದಿರ ವಿಶ್ವಪ್ರಸಿದ್ಧ ಶ್ರದ್ಧಾ ಕೇಂದ್ರವಾಗಲಿದೆ” : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಜನವರಿ,15,2021(..) :ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರ ವಿಶ್ವಪ್ರಸಿದ್ಧ ಶ್ರದ್ಧಾ ಕೇಂದ್ರವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಚಿಂತಾಮಣಿಯಲ್ಲಿ ಇಂದು ಅಯೋಧ್ಯ ಶ್ರೀರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯದ ಉದ್ಘಾಟನೆಯಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಭಾರತೀಯರ ಸಂಕಲ್ಪ ಸಾಕಾರವಾಗುವ ಕಾಲ ಸನ್ನಿಹಿತವಾಗುತ್ತಿದೆ. ಭವ್ಯ ರಾಮ ಮಂದಿರ ವಿಶ್ವಪ್ರಸಿದ್ಧ ಶ್ರದ್ಧಾ ಕೇಂದ್ರವಾಗಲಿದೆ ಎಂದು ತಿಳಿಸಿದ್ದಾರೆ. : ------..