ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: 11 ಮಂದಿ ದುರ್ಮರಣ…. ಧಾರವಾಡ,ಜನವರಿ,15,2021(..):ಸಂಕ್ರಾಂತಿ ಹಬ್ಬದ ಮರುದಿನವೇ ಜವರಾಯ ಅಟ್ಟಹಾಸ ಮೆರೆದಿದ್ದು ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಇಟ್ಟಿಗಟ್ಟಿ ಬಳಿ ರಾ.ಹೆ 4ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 9 ಮಹಿಳೆಯರು ಓರ್ವ ಬಾಲಕ ಸೇರಿ 11 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟವರು ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … 11 . . . : - – 11 -- -