“ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ” : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮೈಸೂರು,ಜನವರಿ,15,2021(..): ಸಿಎಂ ಬಿ.ಎಸ್.ವೈ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಿ.ಎಸ್.ವೈ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ, ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ವ್ಯಂಗ್ಯಮಾಡಿದ್ದಾರೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ?ಸಿ.ಡಿ ತೋರಿಸಿ ಬಿ.ಎಸ್.ವೈ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? ಎಂದು ಪ್ರಶ್ನಿಸಿದ್ದಾರೆ. …. “ ”: , . 15, 2021 (..): “ .. . , . . ,” .“ ’ , . . ,” . , , “ ?”: / .. / / :-- ------