ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾದ ಶಾಸಕ ಮುನಿರತ್ನ ಹಾಗೂ ಹೆಚ್.ನಾಗೇಶ್… ಬೆಂಗಳೂರು,ಜನವರಿ,13,2021(..):ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 7ಮಂದಿ ನೂತನ ಸಚಿವರಾಗಿ ಸಿಎಂ ಬಿಎಸ್ ವೈ ಸಂಪುಟ ಸೇರ್ಪಡೆಯಾಗಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಹಲವು ಶಾಸಕರು ತಮ್ಮ ತಮ್ಮ ಬೇಸರವನ್ನ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸಚಿವ ಸ್ಥಾನದಿಂದ ಹೆಚ್. ನಾಗೇಶ್ ಗೆ ಕೋಕ್ ಕೊಡಲಾಗಿದೆ. ನಿರೀಕ್ಷೆ ಇಟ್ಟುಕೊಂಡಿದ್ದ ಶಾಸಕ ಮುನಿರತ್ನಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಿಜೆಪಿ ನಾಯಕರು ಸಮಾಧಾನಪಡಿಸಿದ್ದಾರೆ. ಈ ಮಧ್ಯೆ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಇದೀಗ ಶಾಸಕ ಮುನಿರತ್ನ ಹಾಗೂ ಹೆಚ್. ನಾಗೇಶ್ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಭೇಟಿಯಾಗಿದ್ದಾರೆ. ಕುಮಾರಕೃಪ ಅತಿಥಿಗೃಹದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಶಾಸಕ ಮುನಿರತ್ನ ಹಾಗೂ ಹೆಚ್. ನಾಗೇಶ್ ಭೇಟಿಯಾಗಿದ್ದಾರೆ. ಇದೇ ವೇಳೆ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು. : - - –-- -