“ಅಂಗನವಾಡಿ ಕೇಂದ್ರಗಳ ತೆರೆಯುವ ಸಂಬಂಧ ಕ್ರಮಕೈಗೊಳ್ಳಿ” : ಸುಪ್ರೀಂ ಸೂಚನೆ ಬೆಂಗಳೂರು,ಜನವರಿ,13,2021(..) :ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಸಂಬಂಧ ಜನವರಿ 31ರ ಹೊತ್ತಿಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಅಂಗನವಾಡಿ ಆರಂಭಿಸುವ ಸಂಬಂಧ ಕ್ರಮಕೈಗೊಳ್ಳಿ ಎಂದು ಸೂಚಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ ಆರಂಭಗೊಂಡಿಲ್ಲ. 6 ವರ್ಷದ ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಇರುವ ಅಂಗನವಾಡಿ ಕೇಂದ್ರಗಳನ್ನು ಮತ್ತೆ ಆರಂಭಿಸಿ ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಎಂದು ಹೇಳಲಾಗಿದೆ.ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ, ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ತಾಯಿ-ಮಗುವಿಗೆ ಪೂರಕ ಆಹಾರ ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. …. , . 13, 2021 (..): ’ 31. , -19 . . , . .: / . 31. :------–