ಮುಡಾವನ್ನ ಭ್ರಷ್ಟಾಚಾರ ಮುಕ್ತಗೊಳಿಸಿ ಆಯುಕ್ತರನ್ನ ಅಮಾನತು ಮಾಡುವಂತೆ ಆಗ್ರಹಿಸಿ ಸಹಿ ಸಂಗ್ರಹ… ಮೈಸೂರು,ಜನವರಿ,12,2021(..):ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ, ಮುಡಾ ಆಯುಕ್ತರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು. ಇತ್ತೀಚೆಗೆ ಮುಡಾದಲ್ಲಿ ಅಕ್ರಮಗಳು ಹೆಚ್ಚಾಗುತ್ತಿವೆ. ಪ್ರತಿ ನಿತ್ಯ ಒಂದಲ್ಲಾ ಒಂದು ಅಕ್ರಮ ಪ್ರಕರಣದಲ್ಲಿ ಬೆಳಕಿಗೆ ಬರುತ್ತಿವೆ. 25 ರಿಂದ 30 ವರ್ಷಗಳಿಂದ ಮುಡಾದ ಬಹುತೇಕ ಅಧಿಕಾರಿಗಳು ವರ್ಗಾವಣೆಯಾಗಿಲ್ಲ. ಈ ಕೂಡಲೇ ಸರ್ಕಾರ ಮುಡಾ ಅಕ್ರಮಗಳಿಗೆ ಕಡಿವಾಣ ಹಾಕಿ ಕೂಡಲೇ ಮುಡಾ ಆಯುಕ್ತರನ್ನ ಅಮಾನತು ಮಾಡುವಂತೆ ಒತ್ತಾಯಿಸಿದರು. ಸಹಿ ಸಂಗ್ರಹ ಅಭಿಯಾನದಲ್ಲಿ ಪ್ರೊ. ಮಹೇಶ್ ಚಂದ್ರಗುರು, ಪಿ.ವಿ. ನಂಜರಾಜ ಅರಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು. : - -- -’- .