ನನಗೆ ಸಚಿವ ಸ್ಥಾನ ನೀಡಿದ್ದಾರೆ- ಶಾಸಕ ಮುರುಗೇಶ್ ನಿರಾಣಿ…. ಬೆಂಗಳೂರು,ಜನವರಿ,13,2021(..):ನನಗೆ ಸಚಿವ ಸ್ಥಾನ ನೀಡಿದ್ದಾರೆ. ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಇಲಾಖೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಮುರುಗೇಶ್ ನಿರಾಣಿ, ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಚಿವರ ಪಟ್ಟಿಯಲ್ಲಿ ನನ್ನ ಹೆಸರಿದೆ ಅನ್ನೋದು ಗೊತ್ತಾಗಿದೆ. ಸಚಿವ ಸ್ಥಾನ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ ಅರ್ಪಿಸುತ್ತೇನೆ. ಪಕ್ಷದಲ್ಲಿ ದುಡಿದವರಿಗೆ ಅವಕಾಶ ಕೊಡ್ತಾರೆ ಎಂದು ಗೊತ್ತಿತ್ತು. ನನಗೆ ಯಾವುದೇ ಖಾತೆ ನೀಡಿದರೂ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. : -- -