ಮೈಸೂರು ನಗರ ಪಾಲಿಕೆ ಬಜೆಟ್ ತಯಾರಿಕೆ ಕುರಿತು ನಾಳೆ ಸಾರ್ವಜನಿಕ ಸಮಾಲೋಚನಾ ಸಭೆ… ಮೈಸೂರು, ಜನವರಿ,12,2021(..):ಮೈಸೂರು ನಗರ ಪಾಲಿಕೆಯ 2021-22 ನೇ ಸಾಲಿನ ಆಯವ್ಯಯ ತಯಾರಿಸಲು ನಾಗರೀಕರು ಮತ್ತು ಸಂಘ ಸಂಸ್ಥೆಗಳ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲು ಸಾರ್ವಜನಿಕ ಸಮಾಲೋಚನಾ ಸಭೆ ಆಯೋಜಿಸಲಾಗಿದೆ. ನಾಳೆ ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾಲೋಚನೆ ಸಭೆಯನ್ನು ನಡೆಯಲಿದೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರು ಆಗಮಿಸಿ ಈ ಸಾಂಸ್ಕೃತಿಕ ನಗರಿಯ ಸರ್ವತೋಮುಖ ಅಭಿವೃದ್ಧಿಗೆ ಅಮೂಲ್ಯ ಸಲಹೆಗಳನ್ನು ನೀಡಬಹುದು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : –- - –-