ಸಿಂಧೂರಿ ವರ್ಗ , ವದಂತಿಗೆ ತೆರೆ ; ಕಡೆಗೂ ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ನೇಮಕ..! ಮೈಸೂರು, ಜ.12, 2021 : (.. ) ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನ್ ಕುಮಾರ್ ಮಲಪತಿ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಪವನ್ ಕುಮಾರ್ , ಅವರನ್ನು ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಜ.11 ರ ಸಂಜೆ ಆದೇಶ ಹೊರಡಿಸಲಾಗಿದೆ.ಈ ಮೊದಲು ಬಳ್ಳಾರಿ ಡಿಸಿಯಾಗಿದ್ದ ಎಸ್.ಎಸ್.ನಕುಲ್ ಅವರು ಕೇಂದ್ರ ಸೇವೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ, ಪವನ್ ಕುಮಾರ್ ಅವರನ್ನು ನೂತನ ಡಿಸಿಯನ್ನಾಗಿ ನೇಮಿಸಿದೆ. ಸಿಂಧೂರಿ ವದಂತಿ: ಮೈಸೂರು ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಅವರನ್ನು ಬಳ್ಳಾರಿಗೆ ವರ್ಗಾಯಿಸಲಾಗಿದೆ ಎಂಬ ವದಂತಿ ಕಳೆದ ವಾರ ಹಬ್ಬಿತ್ತು.ರಾಜ್ಯದ ಸ್ಥಳೀಯ ಪತ್ರಿಕೆಯೊಂದರಲ್ಲಿ ಈ ಬಗ್ಗೆ ಸುದ್ದಿ ಪ್ರಕಟಿಸಲಾಗಿತ್ತು. ರೋಹಿಣಿ ಸಿಂಧೂರಿ ನೇಮಕ ಪ್ರಶ್ನಿಸಿ ಸಿಎಟಿ ಮೊರೆ ಹೋಗಿರುವ ಕಾರಣ, ಸರಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ರೋಹಿಣಿ ಸಿಂಧೂರಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಿದೆ ಎಂಬುದು ಸುದ್ದಿಯ ಸಾರಾಂಶವಾಗಿತ್ತು. ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯನ್ನೇ ನಿಜವೆಂದು ನಂಬಿ, ಸೋಷಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು.ಇದೀಗ ರಾಜ್ಯ ಸರಕಾರ, ಪವನ್ ಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸುವ ಮೂಲಕ ವದಂತಿಗೆ ತೆರೆ ಎಳೆದಿದೆ. : – - . : . 11, . , . . , .. , , ., , .