ಕೇಂದ್ರ ಸರ್ಕಾರಕ್ಕೆ ಹಿನ್ನೆಡೆ: ನೂತನ ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ತಡೆ ನೀಡಿ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್… ನವದೆಹಲಿ,ಜನವರಿ,12,2021(..):ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆ ನೀಡಿ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ. ವಿವಾದಿತ ಕೃಷಿ ಮಸೂದೆ ಕುರಿತು ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯವು, ಕೃಷಿ ಮಸೂದೆ ಕುರಿತ ಸಮಸ್ಯೆಗಳನ್ನು ಬಗೆಹರಿಸಲೇಬೇಕಿದ್ದು ನಾವು ಸಮಿತಿಯನ್ನು ರಚನೆ ಮಾಡುತ್ತಿದ್ದೇವೆ. ಪ್ರತಿಭಟನೆ ನಡೆಸುವುದೇ ಆದರೆ, ನಡೆಸಿ ಎಂದು ರೈತರಿಗೆ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಇನ್ನು ಮುಂದಿನ ಆದೇಶದವರೆಗೆ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಪ್ರೀಂಕೋರ್ಟ್ ತಡೆನೀಡಿದ್ದು ಸಮಸ್ಯೆ ಇತ್ಯಾರ್ಥಕ್ಕೆ ನಾಲ್ವರು ತಜ್ಞರನ್ನೊಳಗೊಂಡ ಸಮಿತಿಯನ್ನ ರಚನೆ ಮಾಡಿದೆ. ಹಾಗೆಯೇ ಸಮಸ್ಯೆ ಇತ್ಯಾರ್ಥಕ್ಕೆ ತಜ್ಞರ ಸಮಿತಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 45 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರಿಗೆ ಗೆಲುವು ಸಿಕ್ಕಂತಾಗಿದೆ. … .: , . 12, 2021 (..): . ’ . ’ , . , . ., - . 45 .: / / . / / : - - -