ಇಂದು ಸ್ವಾಮಿ ವಿವೇಕಾನಂದರ ಜಯಂತಿ: ರಾಷ್ಟ್ರಪತಿ ರಮನಾಥ್ ಕೋವಿಂದ್ ಮತ್ತು ಪ್ರಧಾನಿ ಮೋದಿ ಅವರಿಂದ ಸ್ಮರಣೆ… ನವದೆಹಲಿ,ಜನವರಿ,12,2021(..):ಇಂದು ಸ್ವಾಮಿ ವಿವೇಕಾನಂದರ 157ನೇ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಸ್ವಾಮಿ ವಿವೇಕಾನಂದರನ್ನ ಸ್ಮರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನನ್ನ ವಿದೇಯ ನಮನಗಳು. ಇಡೀ ಮನುಕುಲಕ್ಕೆ ಅವರೊಬ್ಬರು ಸ್ಪೂರ್ತಿಯಾಗಿದ್ದಾರೆ. ವಿಶೇಷವಾಗಿ ಯುವಜನತೆಗೆ ಅವರು ಭಾರತದ ಆಧ್ಯಾತ್ಮಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸಿದವರು. ಜತೆಗೆ ಅದನ್ನು ಜಾಗತಿಕ ರಂಗದಲ್ಲಿ ಕೇಂದ್ರೀಕರಿಸಿದರು.ಅವರ ಬೋಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇವೆ ಎಂದಿದ್ದಾರೆ. ಇನ್ನು ನರೇಂದ್ರ ಮೋದಿ ಅವರು ಸಹ ಸ್ವಾಮಿ ವಿವೇಕಾನಂದ ಅವರನ್ನ ಸ್ಮರಿಸಿದ್ದಾರೆ. ಈ ಬಾರಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನಮೋ ಆಪ್ ನಲ್ಲಿ ವಿವೇಕಾನಂದರ ಆಲೋಚನೆಗಳು ಮತ್ತು ವೈಯಕ್ತಿಕ ಸಂದೇಶಗಳನ್ನು ನೀವು ಹಂಚಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಅವರ ಅದ್ವಿತೀಯ ಆಲೋಚನೆಗಳನ್ನು ಇಂದಿನ ಜನಾಂಗದವರಿಗೆ ಪಸರಿಸುವ ಕೆಲಸ ಮಾಡೋಣ ಎಂದಿದ್ದಾರೆ. : ’- –- – – .