ಸಿ.ಪಿ ಯೋಗೇಶ್ವರ್ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಜನವರಿ,11,2021(..): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸಿಪಿ ಯೋಗೇಶ್ವರ್ ನಕಲಿ ದಾಖಲೆ ಸೃಷ್ಠಿಸಿ ಭೂಮಿ ಖರೀದಿಸಿದ್ದಾರೆ. ನಕಲಿ ದಾಖಲೆ ಸೃಷ್ಠಿಸಿ 13 ರಿಂದ 16 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಸುಳ್ಳು ದಾಖಲೆ ನೀಡಿ ಮಗಳ ಹೆಸರಿಗೆ ನೋಂದಾಯಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿ.ಪಿ ಯೋಗೇಶ್ವರ್ ವಸೂಲಿ ಬಗ್ಗೆ ಊರೆಲ್ಲಾ ಚರ್ಚೆ ನಡೆಯುತ್ತಿದೆ. ನಕಲಿ ದಾಖಲೆ ಸೃಷ್ಠಿಸಿ ಭೂಮಿ ಖರೀದಿ ಮಾಡಿದ್ದಾರೆ. ಸುಳ್ಳು ದಾಖಲೆ ನೀಡಿ 13-16 ಎಕರೆ ಭೂಮಿ ಖರೀದಿ ಮಾಡಲಾಗಿದೆ. ಸುಳ್ಳು ದಾಖಲೆ ಸೃಷ್ಠಿಸಿ ಮಗಳ ಹೆಸರಿಗೆ ನೋಂದಣಿ ಮಾಡಿಸಲಾಗಿದೆ. : - – –- .