“ಸರ್ಕಾರ ಕೃಷಿ ಕಾಯ್ದೆ ತಡೆಹಿಡಿಯದಿದ್ದರೇ, ನ್ಯಾಯಾಲಯವೇ ಕಾಯ್ದೆಗಳಿಗೆ ತಡೆಯಾಜ್ಞೆ ನೀಡಲಿದೆ” :-ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ… ಬೆಂಗಳೂರು,ಜನವರಿ,11,2021(..): ಕೃಷಿ ಕಾಯ್ದೆ ಕೇಂದ್ರ ಸರ್ಕಾರ ಏಕೆ ಪ್ರತಿಷ್ಠೆಯ ವಿಷಯವಾಗಿಸಿಕೊಂಡಿದೆ ಎಂದು ಅರ್ಥವಾಗುತ್ತಿಲ್ಲ. ಸರ್ಕಾರ ಕಾಯಿದೆ ತಡೆಹಿಡಿಯದಿದ್ದರೇ, ನ್ಯಾಯಾಲಯವೇ ಕಾಯಿದೆಗಳಿಗೆ ತಡೆಯಾಜ್ಞೆ ನೀಡಲಿದೆ ಎಂದು ಸುಪ್ರೀ ಕೋರ್ಟ್ ನ ಮುಖ್ಯ ನಾಯ್ಯಾಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಸುಪ್ರೀಂ ನ್ಯಾಯಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಸರ್ಕಾರ ಅನುಚ್ಛೇದಗಳ ಬಗ್ಗೆ ಚರ್ಚೆ ನಡೆಸಲು ಬಯಸುತ್ತದೆ. ಆದರೆ, ರೈತರು ಇಡೀ ಕಾನೂನನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಾರೆ. ರೈತರು ಮತ್ತು ಸರ್ಕಾರದ ನಡುವಿನ ಮಾತುಕತೆ ಪದೇ, ಪದೇ ಯಾಕೆ ವಿಫಲವಾಗುತ್ತಿದೆ ಎಂಬುದನ್ನು ನಾವು ವರದಿಗಳಿಂದ ಅರ್ಥ ಮಾಡಿಕೊಂಡಿದ್ದೇವೆ. ಹೀಗಾಗಿ, ನಾವು ಕೇಂದ್ರದಿಂದ ನೇಮಕಗೊಂಡ ಸಮಿತಿಯ ಯಾವುದೇ ನಿರ್ಧಾರ ಕೈಗೊಳ್ಳುವ ವರೆಗೆ ಹಾಲಿ ಕಾನೂನು ಅನುಷ್ಠಾನಕ್ಕೆ ತಡೆ ನೀಡುತ್ತೇವೆ ಎಂದು ಸರ್ವೋಚ್ಛ ನ್ಯಾಯಾಲಯ ತ್ರಿಸದಸ್ಯ ಪೀಠ ತಿಳಿಸಿದೆ.ಪ್ರತಿಭಟನೆಯಲ್ಲಿ ಹಿರಿಯ ನಾಗಕರಿರು ಮತ್ತು ಮಹಿಳೆಯರು ಸಹ ಭಾಗವಹಿಸುತ್ತಿದ್ದಾರೆ. ಕಳೆದ ಬಾರಿ ಸರ್ಕಾರವನ್ನು ಇದೇ ವಿಷಯದ ಕುರಿತು ಪ್ರಶ್ನಿಸಿದರೂ ಉತ್ತರ ಬಂದಿಲ್ಲ. ಈಗ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಚಳಿಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಜಾರಿಗೊಳಿಸದೇ ಇದ್ದರೆ ಏನಾಗಲಿದೆ ಎಂದು ನ್ಯಾಯಾಲಯಕ್ಕೂ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ವಿರುದ್ಧ ಅಸಮಾಧಾನವ್ಯಕ್ತಪಡಿಸಿದೆ. … “ . ’, ”- , . 11, 2021 (..): ’ . .. ’ . , . , . , . , - .: / / / . : --- ------ ..