ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಕೊಳ್ಳೆಗಾಲ ಶಾಸಕ ಎನ್.ಮಹೇಶ್…. ಮೈಸೂರು,ಜನವರಿ,11,2021(..):ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಈ ಮಧ್ಯೆ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೌದು, ಸುತ್ತೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಎನ್. ಮಹೇಶ್, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರೋಲ್ಲ ಹೇಳಿ. ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದ್ರೆ ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು ಎಂದಿದ್ದಾರೆ. ನನಗೆ ಸಚಿವ ಸ್ಥಾನ‌ ಸಿಗುತ್ತೋ ಇಲ್ವೋ ನನಗೆ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೇ ನಾನು ಯಡಿಯೂರಪ್ಪ ಜೊತೆ ಇರುವ ನಿರ್ಧಾರ ಮಾಡಿದ್ದೇನೆ. ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟದ್ದು. ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಪರೋಕ್ಷವಾಗಿ ತಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ. … . , . 11, 2021 (..): . . . , “ ’ . . .”“ ’ , . . ,” .: . / / / : -. - - - -