“ನನ್ನ ನಿರ್ಧಾರ ಬದಲಿಸುವಂತೆ ಒತ್ತಾಯಿಸಬೇಡಿ” : ಸೂಪರ್ ಸ್ಟಾರ್ ರಜನಿಕಾಂತ್ ಮನವಿ ಬೆಂಗಳೂರ,ಜನವರಿ,11,2021(..) :ರಾಜಕೀಯ ಪ್ರವೇಶ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರವನ್ನು ಬದಲಿಸುವಂತೆ ಒತ್ತಾಯ ಮಾಡಬೇಡಿ ಎಂದು ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟುವ ಯೋಜನೆಯಿಂದ ಹಿಂದೆ ಸರಿದಿದ್ದರು. ಆದರೆ, ಅವರ ಅಭಿಮಾನಿಗಳು ಮತ್ತೆ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರು ಅಭಿಮಾನಿಗಳಿಗೆ ತಮ್ಮ ನಿರ್ಧಾರ ಬದಲಿಸದಂತೆ ಒತ್ತಾಯಿಸಿದ್ದಾರೆ. ನನಗೆ ನೋವಾಗುವಂತಹ ವಿಚಾರಗಳಲ್ಲಿ ಪಾಲ್ಗೊಳ್ಳದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ. : ----- --