“ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ” : ಸಿಎಂ ಬಿ.ಎಸ್.ಯಡಿಯೂರಪ್ಪ ಮೈಸೂರು,ಜನವರಿ,11,2021(..): ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ನಿಶ್ವಿತ. ಅದು ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಅದು ಅವತ್ತಿಗೆ ಗೊತ್ತಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.ಸುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ.13ರ ಮಧ್ಯಾಹ್ನ ಅಮಾವಾಸ್ಯೆ ಕಳೆಯುತ್ತದೆ. ಆ ನಂತರ ಒಳ್ಳೆಯ ಸಮಯ ಅಂತ ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸಮಯ ಕೇಳಿಕೊಂಡು ನಿಮಗೂ ಸಮಯ ತಿಳಿಸುತ್ತೇವೆ ಎಂದರು. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ಮಾಡಬೇಕು ಎಂದು ಕೊಂಡಿದ್ದೇನೆ. ಹಣಕಾಸು ಪರಿಸ್ಥಿತಿ ತಕ್ಕಂತೆ ಸೂಕ್ತವಾದ ನಿರ್ಧಾರ ತೆಗೆದುಕೊಂಡು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು. : -13th 14th---- ..