“ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ, ಜೆ.ಡಿ.ಎಸ್ ಅಧಿಕಾರಕ್ಕೆ ಬರಲ್ಲ” :ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ ಮೈಸೂರು,ಜನವರಿ,11,2021(..): ಮತ್ತೆ ಸಿಎಂ ಆಗುತ್ತೇವೆ ಎಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆ.ಡಿ.ಎಸ್ ಅಧಿಕಾರಕ್ಕೆ ಬರುವುದಿಲ್ಲ‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ, 2023ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂಬ ವಿಚಾರ ಕುರಿತು ಮಾತನಾಡಿದ ಅವರು, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ‌ ಎಂದರು. ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗ್ತಿನಿ ಅಂತಿದ್ದಾರೆ. ಅವರ ಪಕ್ಷದವರು ಯಾರಾದರು ಹೇಳಿದ್ದಾರಾ?, ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದು ಹಗಲು ಕನಸು ಎಂದು ವ್ಯಂಗ್ಯವಾಗಿ ಹೇಳಿದರು. : -- - -- --..