“ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡವರಿಗೆ ಅದರ ಮೇಲೆ ಕಣ್ಣು‌” : ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿ ಮೈಸೂರು,ಜನವರಿ,11,2021(..): ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡುತ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರು ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು, ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೀಗಾಗಿ, ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ, ಇದು ಸುಳ್ಳು ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಹೇಳಿದರು. ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ ಗೆದ್ದು ಸ್ವಾಭಾವಿಕವಾಗಿ ಮಂತ್ರಿ ಆಗಬೇಕು ಅಂತ ಅಪೇಕ್ಷೆ ಮಾಡ್ತಾರೆ‌. ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಮಂತ್ರಿಯಾದವರಿಗೆ ಆಗದವರು ಸಹಕಾರ ಕೊಡುತ್ತಾರೆ. ಜನರು ಬಿಜೆಪಿ ಆಡಳಿತ ಮಾಡಲಿ ಅಂದರು. ಆದರೆ, ಅಷ್ಟು ಸ್ಥಾನ ಸಿಗಲಿಲ್ಲ. ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ. ಅದರಂತೆ ಅವರಿಗೆ ಕೊಟ್ಟು ಉಳಿದಿರುವುದರಲ್ಲಿ ನೀಡಲಾಗುತ್ತೆ ಎಂದರು. …. “’ ” – , .11, 2021 (..): . . . . ,” .. , , . , “ . . . , , ,” .: / / : - ------