“ಇಂದು ದೆಹಲಿ ಕಡೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಯಾಣ” ಬೆಂಗಳೂರು,ಜನವರಿ,10,2021(..): ದೆಹಲಿ ನಾಯಕರು ಕರೆದಿದ್ದು, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಈ ವಿಚಾರವನ್ನು ಅವರಿಗೆ ತಿಳಿಸಲಿದ್ದೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವರಿಷ್ಠರು ಬುಲಾವ್ ನೀಡಿದ್ದು, ಇಂದು ಬೆಳಿಗ್ಗೆ ದೆಹಲಿ ವಿಮಾನ ಏರಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದರು.ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡಿ, ರಾಜ್ಯ ಅಭಿವೃದ್ಧಿ ಮತ್ತು ಅನುದಾನದ ವಿಚಾರವಾಗಿ ಚರ್ಚಿಸಲಿದ್ದಾರೆ. ಬಳಿಕ ಪಕ್ಷದ ಹಿರಿಯ ನಾಯಕರೊಂದಿಗೆ ಸಂಪುಟ ವಿಸ್ತರಣೆಯ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. : --- ..-