“ರಂಗೇನಹಳ್ಳಿಯಲ್ಲಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ” ಚಿಕ್ಕಮಗಳೂರು,ಜನವರಿ,10,2021(..): ರಂಗೇನಹಳ್ಳಿಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ನಿನ್ನೆ ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ ನಾಗೇಂದ್ರ (28) ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಸುಜಿತಾ(30), ಅನಿಲ(35) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಂಪತಿ ಮೃತಪಟ್ಟಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : -----