“ಕೆಸೆಟ್ ಪರೀಕ್ಷೆ, 5,495 ಮಂದಿ ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತೆ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್… ಮೈಸೂರು,ಜನವರಿ,08,2021(..) : ಮೈಸೂರು ವಿವಿ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷಾ ಕೇಂದ್ರವು ನಡೆಸಿದ 2020ರ ಕೆಸೆಟ್ ಪರೀಕ್ಷೆಯಲ್ಲಿ 3113 ಪುರುಷ ಅಭ್ಯರ್ಥಿಗಳು ಹಾಗೂ 2382 ಮಹಿಳಾ ಅಭ್ಯರ್ಥಿ ಸೇರಿದಂತೆ ಒಟ್ಟು 5,495 ಮಂದಿ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಶುಕ್ರವಾರ ಕ್ರಾಫರ್ಡ್ ಭವನದ ಅಕಾಡೆಮಿಕ್ ಕೌನ್ಸಿಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಕುಲಪತಿಗಳು ಮಾಹಿತಿ ನೀಡಿದರು. ಕೆಸೆಟ್ ಪರೀಕ್ಷೆಗೆ 1,06,396 ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಅದರಲ್ಲಿ 79,717ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 5,495 ಮಂದಿ ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದು, ಇವರು ಕರ್ನಾಟಕ ರಾಜ್ಯ ವಿವಿಗಳು ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಾಗಿರುತ್ತಾರೆ ಎಂದರು. ಮೈಸೂರು ವಿವಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟ ಅರ್ಹರಾದವರಿಗೆ ಮೈಸೂರು ವಿಶ್ವವಿದ್ಯಾನಿಲಯ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷಾ ಕೇಂದ್ರದಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು. ಈ ಪ್ರಮಾಣಪತ್ರವು ಜೀವಿತಾವಧಿಯ ಸಿಂಧುತ್ವವನ್ನು ಹೊಂದಿರುತ್ತದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮೈಸೂರು ವಿವಿ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷಾ ಕೇಂದ್ರದ ಸಂಯೋಜಕ ಪ್ರೊ.ಎಚ್.ರಾಜಶೇಖರ್ ಹಾಜರಿದ್ದರು. …. – 5,595 .: , . 08, 2021 (..): 5,495 3113 2382 , () , . , . . , -, . 1,06,396 79717 . 5495 .“ , () , . ,” .: . . / () / : --5,495------ . …