ಸಿಸಿಬಿ ವಿಚಾರಣೆಗೆ ಹಾಜರಾದ ನಟಿ ರಾಧಿಕಾ ಕುಮಾರಸ್ವಾಮಿ… ಬೆಂಗಳೂರು,ಜನವರಿ,8,2021(..):ವಂಚಕ ಯುವರಾಜ್ ಜತೆ ಹಣಕಾಸಿನ ವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಹೋದರನ ಜತೆ ನಟಿ ರಾಧಿಕಾ ಕುಮಾರಸ್ವಾಮಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗಿದ್ದು ವಿಚಾರಣೆ ಶುರುವಾಗಿದೆ. ಇನ್ನು ನಟಿ ರಾಧಿಕಾ ಕುಮಾರಸ್ವಾಮಿ ಅವರ ಮೊಬೈಲ್ ಫೋನ್ ಅನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಂಚನೆ ಕೇಸ್ ನಲ್ಲಿ ಬಂಧಿತ ಯುವರಾಜ್ ನಿಂದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಂದು ಕೋಟಿ ರೂ ಹಣ ವರ್ಗಾವಣೆಯಾಗಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನಿನ್ನೆಯೇ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. : - - - -.