ಪ್ರಜ್ವಲ್ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ತೊಂದರೆ ಇಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹುಬ್ಬಳ್ಳಿ, ಏಪ್ರಿಲ್ 29,2024 (..):ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮ ಆಗಲೇಬೇಕು. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದರು. ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಅದಕ್ಕೆ ಸರ್ಕಾರ, ಕಾನೂನು ಕ್ರಮ ಕೈಗೊಳ್ಳಲಿ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು. : , ,