ಕಾಂಗ್ರೆಸ್ ನ ಇಬ್ಬರು ನಾಯಕರು ಸಿಎಂ ಸ್ಥಾನದ ರೇಸ್ ನಲ್ಲಿರುವುದು ನಿಜ- ಸತೀಶ್ ಜಾರಕಿಹೊಳಿ…. ಬಾಗಲಕೋಟೆ, ಜನವರಿ,7,2021(..):ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರೇಸ್ ನಲ್ಲಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸತೀಶ್ ಜಾರಕಿಹೊಳಿ, ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳುತ್ತಾರೆ, ಕೆಲವರು ಹೇಳುವುದಿಲ್ಲ ಅಷ್ಟೆ. ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಾಕಷ್ಟು ಜನರು ಕ್ಯೂನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಬಹಳ ಜನ ಕ್ಯೂನಲ್ಲಿದ್ದಾರೆ. ಕೇವಲ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾತ್ರವಲ್ಲ ಇನ್ನೂ ಅನೇಕರು ಕಾಯುತ್ತಿದ್ದಾರೆ ಎಂದು ಹೇಳಿದರು. : - – - --