“ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ” : ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿ…! ಬೆಂಗಳೂರು,ಜನವರಿ,07,2021(..): ರಾಜ್ಯದ ವಿವಿಧ ಇಲಾಖೆಗಳ / ಹುದ್ದೆಗಳಿಗೆ 2017ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ಈವರೆಗೆ ನೇಮಕಾತಿ ಆದೇಶ ನೀಡದೆ, ಅವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಉದ್ಯೋಗಾಕಾಂಕ್ಷಿಗಳು ಕಳೆದೆರಡು ದಿನಗಳಿಂದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ, ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. : ------ -- …!