ಸೌರವ್ ಗಂಗೂಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ …! ಕೋಲ್ಕತ್ತಾ,ಜನವರಿ,07,2021(..): ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಲಘು ಹೃದಾಯಾಘಾತದಿಂದಾಗಿ ಸೌರವ್ ಗಂಗೂಲಿ ಅವರು ಕಳೆದ 6 ದಿನಗಳ ಹಿಂದೆ ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಗಂಗೂಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಗಂಗೂಲಿ ಅವರು ಮನೆಗೆ ತೆರಳಿದ ಬಳಿಕ ಅವರನ್ನು ಪ್ರತಿನಿತ್ಯ ತಜ್ಞ ವೈದ್ಯರು ಮನೆಯಲ್ಲಿಯೇ ವೈದ್ಯಕೀಯ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. : --- …!