ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆ- ರಾಜ್ಯ ಹವಾಮಾನ ಇಲಾಖೆ ಮಾಹಿತಿ… ಬೆಂಗಳೂರು,ಜನವರಿ,7,2021(..):ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಜತೆಗೆ ಅರಬ್ಬಿ ಸಮುದ್ರದಲ್ಲಿ ಪೂರ್ವದಿಂದ ಬೀಸುವ ಅಲೆಗಳ ಹಿನ್ನೆಲೆ, ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಕೊಡಗು ಹಾಸನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಅಕಾಲಿಕ ಮಳೆಗೆ ರೈತರು ಕಂಗಾಲಾಗಿದ್ದಾರೆ. ಫಸಲು ಕಟಾವು ಮತ್ತು ಒಕ್ಕಣೆ ಕಾರ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದು, ಅಕಾಲಿಕ ಮಳೆಗೆ ಫಸಲಿಗೆ ಹಾನಿಯಾಗುವ ಆತಂಕ ರೈತರಿಗೆ ಎದುರಾಗಿದೆ. … , . 07, 2021 (..): , , . . , , , . .: / / / : – – --