ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ- ಸಚಿವ ಭೈರತಿ ಬಸವರಾಜು ಹೇಳಿಕೆ… ತುಮಕೂರು,ಜನವರಿ,21,2021(..):ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ತುಮಕೂರಿನಲ್ಲಿ ಮಾತನಾಡಿದ ಸಚಿವ ಭೈರತಿ ಬಸವರಾಜು, ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಎಂ.ಟಿಬಿ ನಾಗರಾಜ್, ಆರ್. ಶಂಕರ್, ಶಾಸಕ ಮುನಿರತ್ನಗೆ ಸಚಿವ ಸ್ಥಾನ ನೀಡಲು ಸಿಎಂ ಸಮ್ಮತಿಸಿದ್ದಾರೆ. ನಮ್ಮ ಜತೆ ಬಂದವರಿಗೆ ಸಚಿವ ಸ್ಥಾನ ನೀಡುತ್ತಾರೆ. ಪ್ರಧಾನಿ ಮೋದಿ ಬಿಜೆಪಿ ರಾಜ್ಯಾಧ್ಯಕ್ಷರು ಸಹ ಒಪ್ಪಿದ್ದಾರೆ ಎಂದರು. ಇನ್ನು ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದರು. : – - - .