ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೋನಾ ಸೋಂಕು: 10 ಶಾಲೆಗಳು ಬಂದ್… ಹಾಸನ,ಜನವರಿ,6,2021(..):ಕೊರೋನಾ ರೂಪಾಂತರ ಸೋಂಕಿನ ನಡುವೆ ಜನವರಿ 1 ರಿಂದ ರಾಜ್ಯದಲ್ಲಿ ಶಾಲೆ, ಕಾಲೇಜುಗಳು ಆರಂಭವಾಗಿದ್ದು, ಈ ಮಧ್ಯೆ ಹಾಸನದಲ್ಲಿ 10 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಶಾಲೆಗೆ ಬರುವ ಮೊದಲು ಶಿಕ್ಷಕರು ಮತ್ತು ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಈ ನಡುವೆ ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು, ಪೋಷಕರಿಗೆ ಆತಂಕ ಶುರುವಾಗಿದ್ದು, 10 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಡಿಡಿಪಿಐ ಪ್ರಕಾಶ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಶಾಲೆಯ 7 ಹಾಗೂ 3 ಪ್ರೌಢ ಶಾಲಾ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದೆ. ಚೆನ್ನರಾಯಪಟ್ಟಣದ ಮೂವರಿಗೆ, ಹಾಸನ ತಾಲ್ಲೂಕಿನ ಇಬ್ಬರು, ಹೊಳೇನರಸೀಪುರ ತಾಲ್ಲೂಕಿನ ಇಬ್ಬರಿಗೆ ಕೊರೋನಾ ಸೊಂಕು ಪತ್ತೆಯಾಗಿದೆ. ಶಾಲೆ ಆರಂಭಕ್ಕೂ ಮುನ್ನ ಮೂವರಿಗೆ ಸೋಂಕು ದೃಢಪಟ್ಟಿತ್ತು ಎನ್ನಲಾಗಿದೆ. : –- 10 – - 10 -