ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ- ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ…. ಬೆಂಗಳೂರು,ಜನವರಿ,5,2021(..):ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಎಚ್ಚರಿಕೆ ನೀಡಿರುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ಎಂದು ಎಂಇಎಸ್ ವಿರುದ್ಧ ಗುಡಗಿದ್ದಾರೆ. ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು… ಹಾಗೆಯೇ ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಹೆಚ್.ಡಿ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ ‘ಕನ್ನಡಿಗರಿಗೆ ಸರ್ಕಾರ ಹೆದರಬಾರದು’ ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. : – - - -- – - -