ಏಪ್ರಿಲ್ 23ಕ್ಕೆ ಕೋಟಿಗೊಬ್ಬ-3 ರಿಲೀಸ್ ! ಬೆಂಗಳೂರು, ಜನವರಿ 05, 2020 (..): ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಬಹಿರಂಗ ಪಡಿಸಿದ್ದಾರೆ. ನಿರ್ಮಾಪಕ ಸೂರಪ್ಪ ಬಾಬು ಏಪ್ರಿಲ್ 23 ಕ್ಕೆ ಕೋಟಿಗೊಬ್ಬ 3 ರಿಲೀಸ್ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಈ ಮೊದಲು ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾವನ್ನು ಏಪ್ರಿಲ್ 1 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿತ್ತು. ಇದರ ಬೆನ್ನಲ್ಲೆ ಸುದೀಪ್ ಸಿನಿಮಾ ಬಿಡುಗಡೆಗೂ ದಿನಾಂಕ ಫಿಕ್ಸ್ ಆಗಿದೆ. ದರ್ಶನ್ ಅಭಿನಯದ ರಾಬರ್ಟ್ ಬಿಡುಗಡೆ ದಿನಾಂಕ ಘೋಷಣೆಯಾಗಬೇಕಿದೆ.