ಪುತ್ರನ ವಿರುದ್ದದ ಲೈಂಗಿಕ ದೌರ್ಜನ್ಯ ಆರೋಪ ಕುರಿತು ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್ ಏನು..? ಬೆಂಗಳೂರು, ಏಪ್ರಿಲ್, 29, 2024 (..):ಹಾಸನ ಸಂಸದ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪುತ್ರನ ವಿರುದ್ದದ ಈ ರೀತಿಯ ಆರೋಪ ಕುರಿತು ಮಾಜಿ ಸಚಿವ, ಶಾಸಕ ಹೆಚ್.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿ ರೇವಣ್ಣ, ‘ನಾನೆಲ್ಲೂ ಓಡಿ ಹೋಗಿಲ್ಲ. ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ಪ್ರಜ್ವಲ್ ಬರುತ್ತಾನೆ ಎಸ್ ಐಟಿ ತನಿಖೆ ಮಾಡುತ್ತಿರುವುದಿರಂದ ಏನು ಹೇಳಲ್ಲ ಎಂದರು. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ತಿಳಿಸಿದ್ದಾರೆ. ಸರ್ಕಾರ ಅವರದ್ದಿದೆ, ಏನು ಬೇಕಾದರೂ ಮಾಡಲಿ. ತನಿಖೆ ನಡೆಸಿ ಕಾನೂನಿನ ರೀತಿ ಏನಿದೆ ಅದಾಗಲಿ. ದೆವೇಗೌಡರ ಕುಟುಂಬದ ಮೇಲೆ ಆರೋಪವೇನು ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ ಎಂದು ಹೆಚ್.ಡಿ ರೇವಣ್ಣ ತಿಳಿಸಿದರು. : , , ,