ಪೋಕ್ಸೋ ಪ್ರಕರಣ: ಮುರುಘಾಶ್ರೀ ಮತ್ತೆ ಜೈಲುಪಾಲು ಚಿತ್ರದುರ್ಗ,ಏಪ್ರಿಲ್,29,2024 (..):ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ದಾವಣಗೆರೆಯಿಂದ ಆಗಮಿಸಿದ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಬಂದು ಶರಣಾಗಿದ್ದು, ಈ ವೇಳೆ ಮುರುಘಾಶ್ರೀಯನ್ನು ಕೋರ್ಟ್ ನ್ಯಾಯಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುರುಘಾ ಶ್ರೀಗಳನ್ನು ಪೊಲೀಸ್ ವ್ಯಾನ್ ನಲ್ಲಿ ಜೈಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿತ್ತು. : , , ,