ಏಷಿಯನ್ ಪೇಂಟ್ಸ್ ಕಾರ್ಖಾನೆ ಬಳಿ ಪ್ರತಿಭಟನಾನಿರತ ರೈತರ ಮನವಿ ಆಲಿಸಿ ಭರವಸೆ ನೀಡಿದ ಸಂಸದ ಪ್ರತಾಪ್ ಸಿಂಹ… ಮೈಸೂರು,ಜನವರಿ,4,2021(..):ಏಷಿಯನ್ ಪೇಂಟ್ಸ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಸಮಸ್ಯೆ ಆಲಿಸಿದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಮಸ್ಯೆ ಬಗೆಹರಿಸುವ ಭರವಸೆಯನ್ನ ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ, ಪ್ರತಿಭಟನಾ ನಿರತ ರೈತರ ಮನವಿ ಆಲಿಸಿ ಕೂಡಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ಸಮಸ್ಯೆ ಬಗ್ಗೆ ನಿನ್ನೆ ಕಾರ್ಮಿಕ ಸಚಿವರೊಂದಿಗೆ ಚರ್ಚೆ ಮಾಡಿದ್ದೇನೆ. ಕಾರ್ಮಿಕ ಸಚಿವರು ಕಾರ್ಖಾನೆ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದಾರೆ. ಭೂಮಿ ಕೊಟ್ಟ ರೈತರಿಗೆ ಇದೇ ಸ್ಥಳದಲ್ಲಿ ಕೆಲಸ ನೀಡಬೇಕು. ರೈತರ ಬೇಡಿಕೆಗೆ ಕಾರ್ಖಾನೆ ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದರು. : - - - – - .