‘’ಶೇ.50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟಕ್ಕೆ ಮುಂದಾದ ಮೈಸೂರು ವಿವಿ’’ ಮೈಸೂರು,ಜನವರಿ.04,2021(..) :ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ಸಹಯೋಗದಲ್ಲಿ ಜನವರಿ 6ರಂದು ”ಕೃತಿಗಳ ಲೋಕಾರ್ಪಣೆ” ಹಾಗೂ ಶೇ.50 ರಿಯಾಯಿತಿ ದರದಲ್ಲಿ ಎರಡು ದಿನಗಳ ‘’ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ’’ವನ್ನು ಆಯೋಜಿಸಲಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಸೋಮವಾರ ವಿವಿಯ ಕ್ರಾಫರ್ಡ್ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ಸಂಸ್ಥೆಗಳ ಪ್ರಕಟಣಾ ಕಾರ್ಯದ ಮಹತ್ವ ಮತ್ತು ಸಾಧನೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಜನವರಿ 6 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿ ಪ್ರಾಚ್ಯವಿದ್ಯಾ ಸಂಶೋಧನಾಲಯ ಆವರಣದಲ್ಲಿ ಈ ಮೇಳ ಉದ್ಘಾಟನೆಯಾಗಲಿದೆ ಎಂದರು. ಪುಸ್ತಕ ಮೇಳದ ಉದ್ಘಾಟನಾ ಕಾರ್ಯಕ್ರಮದಂದು ಡಾ.ಎಸ್.ಶಿವರಾಜಪ್ಪ ಅವರ ‘’ಕವಿಜನ ಕಾಮಧೇನು ಮುಮ್ಮಡಿ ಕೃಷ್ಣರಾಜ ಒಡೆಯರ್’’, ಡಾ.ಸಿ.ಪಾರ್ವತಿ ಅವರ ‘’ಸಿದ್ದಸಿದ್ದಾಂತ ಪದ್ಧತಿ’’, ಡಾ,ಎಂ.ಗೀತಾ ಅವರ ‘’ಅಶ್ವಲಕ್ಷಣಮ್’’, ಜಿ.ಎನ್.ಸಿದ್ದಲಿಂಗಪ್ಪ ಅವರ ‘’ಪ್ರೊ.ಎಚ್.ದೇವಿರಪ್ಪ ಬದುಕು ಮತ್ತು ಬರಹ’’, ಎಸ್.ಸಿ.ಶೋಭಾ ಅವರ ‘’ಶ್ರೀಚಾಮುಂಡಿಕಾ ಲಘುನಿಘಂಟು’’, ಡಾ.ದಿದ್ದಿಗಿ ವಂಶಿ ಕೃಷ್ಣ ಅವರ ‘’ಸೂರ್ಯಚಂದ್ರವಂಶಾನುಚರಿತಮ್’’ ಒಟ್ಟು ಐದು ಕೃತಿಗಳ ಲೋಕಾರ್ಪಣೆಯನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಪುಸ್ತಕ ಮೇಳದಲ್ಲಿ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಪ್ರಸಾರಾಂಗ ಪ್ರಕಟಿಸಿರುವ ಬಹುತೇಕ ಪುಸ್ತಕಗಳು ಶೇ.50 ರಿಯಾಯಿತಿ ದರದಲ್ಲಿ ಓದುಗರಿಗೆ ದೊರೆಯಲಿವೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್.ಎಂ.ತಳವಾರ, ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಉಪಸ್ಥಿತರಿದ್ದರು. 50% , . 04, 2020 (..): , - ‘ ,’ ‘ ’ 6. , . . , -, 50% . . , 11.00 . 6.: / 50% / / / : 50%--- -