ಕೇಂದ್ರ ಸಚಿವ ಡಿವಿ ಸದಾನಂದಗೌಡರು ಇಂದು ಅಥವಾ ನಾಳೆ ಡಿಸ್ಚಾರ್ಜ್- ನಳೀನ್ ಕುಮಾರ್ ಕಟೀಲ್ ಹೇಳಿಕೆ… ಬೆಂಗಳೂರು,ಜನವರಿ,4,2021(..): ನಿನ್ನೆ ಚಿತ್ರದುರ್ಗಕ್ಕೆ ತೆರಳಿದ್ದ ವೇಳೆ ಅಸ್ವಸ್ಥರಾಗಿ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಡಿ.ವಿ ಸದಾನಂದಗೌಡರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಡಿವಿ ಸದಾನಂದಗೌಡರು ಆರೋಗ್ಯವಾಗಿದ್ದಾರೆ. ಇಂದು ಅಥವಾ ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದರು. ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು ಲೋ ಶುಗರ್ʼನಿಂದ ಅಸ್ವಸ್ಥರಾಗಿದ್ದರು. ಬೆಂಗಳೂರಿನ ಅಸ್ಟರ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. : - –- – . .